Health-and-Nutrition/C2/Cradle-Hold-for-Breastfeeding/Kannada

From Script | Spoken-Tutorial
Revision as of 18:15, 25 April 2019 by Sandhya.np14 (Talk | contribs)

(diff) ← Older revision | Latest revision (diff) | Newer revision → (diff)
Jump to: navigation, search
Time
Narration
00:01 Cradle hold for Breastfeeding (ಸ್ತನ್ಯಪಾನಕ್ಕಾಗಿ ಕ್ರೇಡಲ್ ಹೋಲ್ಡ್) ಎಂಬ ಈ 'ಸ್ಪೋಕನ್ ಟ್ಯುಟೋರಿಯಲ್'ಗೆ ನಿಮಗೆ ಸ್ವಾಗತ.
00:06 ಈ ಟ್ಯುಟೋರಿಯಲ್ ನಲ್ಲಿ, ನಾವು -
00:09 ತಾಯಿಯು ಮಗುವಿಗೆ ಹಾಲುಣಿಸುವಾಗ ಆರಿಸಿಕೊಳ್ಳಬೇಕಾದ ಸರಿಯಾದ ವಿಧಾನ,
00:15 ಹಾಲುಣಿಸುವ ಮೊದಲು ತಾಯಿಯ ಪೂರ್ವ ಸಿದ್ಧತೆಗಳು ಮತ್ತು
00:18 'ಕ್ರೇಡಲ್ ಹೋಲ್ಡ್' ಅನ್ನು ಹೇಗೆ ಮಾಡುವುದು ಇವುಗಳ ಬಗ್ಗೆ ಕಲಿಯುತ್ತೇವೆ.
00:22 ನಾವು ಈಗ ಆರಂಭಿಸೋಣ.

ಪ್ರಪಂಚದಾದ್ಯಂತ, ತಾಯಂದಿರು ವಿವಿಧ ರೀತಿಯಲ್ಲಿ ತಮ್ಮ ಶಿಶುವನ್ನು ಹಿಡಿದುಕೊಂಡು ಸ್ತನ್ಯಪಾನ ಮಾಡಿಸುತ್ತಾರೆ. ಹಿಂದಿನ ಒಂದು ಟ್ಯುಟೋರಿಯಲ್ ನಲ್ಲಿ ಚರ್ಚಿಸಿದಂತೆ, ತಾಯಿಯು ತನ್ನ ಮಗುವಿಗೆ ಹಾಲುಣಿಸುವ ಅತ್ಯುತ್ತಮ ವಿಧಾನದಲ್ಲಿ -

00:39 ತಾಯಿ ಮತ್ತು ಮಗು ಇಬ್ಬರೂ ಹಾಲುಣಿಸುವ ಸಂಪೂರ್ಣ ಅವಧಿಯಲ್ಲಿ ಆರಾಮವಾಗಿ ಇರುತ್ತಾರೆ.
00:45 ಮಗು, ತಾಯಿಯ ಸ್ತನಕ್ಕೆ ಸರಿಯಾಗಿ ಅಂಟಿಕೊಳ್ಳಲು (attach)
00:50 ಮತ್ತು ಸಾಕಷ್ಟು ಹಾಲನ್ನು ಪಡೆಯಲು ಸಾಧ್ಯವಾಗಿರುತ್ತದೆ.
00:54 'ಕ್ರೇಡಲ್ ಹೋಲ್ಡ್' ಎಂಬ ವಿಧಾನದ ಬಗ್ಗೆ ನಾವು ಕಲಿಯೋಣ.
00:59 ಮಗುವಿಗೆ ಹಾಲುಣಿಸುವ ಮೊದಲು, ತಾಯಿಯು ಸಾಬೂನು ಮತ್ತು ನೀರಿನಿಂದ ತನ್ನ ಕೈಗಳನ್ನು
01:05 ತೊಳೆದುಕೊಂಡು ಚೆನ್ನಾಗಿ ಒಣಗಿಸಿಕೊಳ್ಳಬೇಕು.
01:10 ನಂತರ, ಅವಳು ಒಂದು ಲೋಟ ಕುದಿಸಿ ಆರಿಸಿದ ನೀರನ್ನು ಕುಡಿಯಬೇಕು.
01:15 ಹಾಲುಣಿಸುವ ತಾಯಂದಿರು, ದಿನದಲ್ಲಿ ಸರಾಸರಿ 750 ರಿಂದ 850 ಮಿಲಿಲೀಟರ್ ಹಾಲನ್ನು ಉತ್ಪಾದಿಸುತ್ತಾರೆ.
01:22 ಆದ್ದರಿಂದ, ಅವರು ತಮ್ಮ ದೈನಂದಿನ ನೀರಿನ ಸೇವನೆಯನ್ನು ಹೆಚ್ಚಿಸುವುದು ಅವಶ್ಯವಾಗಿದೆ.
01:27 ನಂತರ, ನಾವು ತಾಯಿಯ ಸ್ಥಿತಿ ಯ ಬಗ್ಗೆ (position) ಚರ್ಚಿಸೋಣ.
01:31 ತಾಯಿಯು ನೆಲದ ಮೇಲೆ ಅಥವಾ ಹಾಸಿಗೆಯ ಮೇಲೆ, ಸುಖಾಸನದಲ್ಲಿ (cross legged position)
01:36 ಅಥವಾ, ಕುರ್ಚಿಯಲ್ಲಿ ನೆಲದ ಮೇಲೆ ತನ್ನ ಪಾದಗಳನ್ನು ಊರಿಕೊಂಡು ಕುಳಿತುಕೊಳ್ಳಬೇಕು.
01:41 ಕುರ್ಚಿ ತುಂಬಾ ಎತ್ತರವಾಗಿದ್ದು ಅವಳ ಪಾದಗಳು ನೆಲಕ್ಕೆ ತಲುಪದಿದ್ದರೆ, ಆಗ-
01:47 ಆಕೆಯು ತನ್ನ ಪಾದಗಳನ್ನು ಸಣ್ಣ ಸ್ಟೂಲ್ ಮೇಲೆ ಅಥವಾ ನೆಲದ ಮೇಲೆ ಇರಿಸಿದ ದಿಂಬುಗಳ ಮೇಲೆ ಇಟ್ಟುಕೊಳ್ಳಬಹುದು.
01:53 ಕುಳಿತಿರುವಾಗ ಬೆನ್ನು ನೋವನ್ನು ತಪ್ಪಿಸಲು- ಅವಳ ಬೆನ್ನು ನೇರವಾಗಿದ್ದು
02:00 ಭುಜಗಳು ಏರಿಸಿದ ಅಥವಾ ಇಳಿಸಿದ ಸ್ಥಿತಿಯಲ್ಲಿರದೆ, ವಿರಾಮದಲ್ಲಿ ಇರುವುದನ್ನು ಅವಳು ಖಚಿತಪಡಿಸಿಕೊಳ್ಳಬೇಕು.
02:05 ಈ ವಿರಾಮದ ಸ್ಥಿತಿಯು ಹಾಲುಣಿಸುವ ಅವಧಿಯ ಉದ್ದಕ್ಕೂ ಹಾಗೆಯೇ ಇರಬೇಕು.
02:12 ಈಗ, ತಾಯಿಯು ಮಗುವಿಗೆ ಹಾಲುಣಿಸುವ ಸ್ತನವನ್ನು ಮಾತ್ರ ಹೊರಗೆ ತೆಗೆಯಬೇಕು.
02:18 ಅವಳು ಸ್ತನದ ಮೇಲೆ ತನ್ನ ಬ್ರಾ ಅಥವಾ ರವಿಕೆಯ ಒತ್ತಡವು ಬಾರದಂತೆ ನೋಡಿಕೊಳ್ಳಬೇಕು.
02:25 ತಾಯಿಯು ಆರಾಮವಾಗಿ ಕುಳಿತುಕೊಂಡ ನಂತರ, ಮಗುವನ್ನು ಅವಳ ಬಳಿಗೆ ತರಬೇಕು.
02:29 ತಾಯಿಯು ಹಾಲುಣಿಸುವ ಸ್ತನದ ಬದಿಯ ತೋಳಿನಿಂದ, ತನ್ನ ಮಗುವನ್ನು ಹಿಡಿದಿರಬೇಕು.
02:37 ಮಗುವಿನ ತಲೆಯನ್ನು ಅದೇ ಕೈಯ ಮೊಣಕೈನ ಒಳಭಾಗದಲ್ಲಿ ಆರಾಮವಾಗಿ ಇರಿಸಬೇಕು.
02:44 ಅದೇ ತೋಳಿನಿಂದ, ತಾಯಿಯು ತನ್ನ ಶಿಶುವಿನ ತಲೆ, ಕುತ್ತಿಗೆ ಮತ್ತು ದೇಹವನ್ನು ಹಿಡಿದುಕೊಂಡಿರಬೇಕು.
02:51 ಈ ಚಿತ್ರದಲ್ಲಿ, ತಾಯಿಯು ಮಗುವಿಗೆ ತನ್ನ ಬಲಗಡೆಯ ಸ್ತನದಿಂದ ಹಾಲುಣಿಸುವಳು.
02:56 ಆದ್ದರಿಂದ, ಮಗುವಿನ ಶರೀರವನ್ನು ಹಿಡಿದುಕೊಳ್ಳಲು ಅವಳು ತನ್ನ ಬಲತೋಳನ್ನು ಬಳಸುತ್ತಿದ್ದಾಳೆ ಮತ್ತು
03:04 ಮಗುವಿನ ತಲೆಯು ಬಲಗಡೆಯ ಮೊಣಕೈನ ಒಳಭಾಗದಲ್ಲಿ ಆರಾಮವಾಗಿ ಇರಿಸಲ್ಪಟ್ಟಿದೆ.
03:10 ಮಗುವನ್ನು ಎತ್ತಿಕೊಳ್ಳಲು ತಾಯಿಗೆ ಸಹಾಯವು ಬೇಕಾಗಿದ್ದರೆ, ಅವಳು ಮಗುವಿನ ಕೆಳಗೆ, ತನ್ನ ತೊಡೆಯ ಮೇಲೆ ಒಂದು ದಿಂಬನ್ನು ಇಟ್ಟುಕೊಳ್ಳಬಹುದು.
03:19 ನೆನಪಿಡಿ, ತಾಯಿಯು ಯಾವಾಗಲೂ ತನ್ನ ಬೆನ್ನನ್ನು ಬಗ್ಗಿಸಿ ಸ್ತನವನ್ನು ಮಗುವಿನ ಹತ್ತಿರ ತರಬಾರದು.
03:25 ಇದರಿಂದ ಅವಳಿಗೆ ತೊಂದರೆಯಾಗುತ್ತದೆ ಮತ್ತು ಬೆನ್ನು ನೋವು ಬರುತ್ತದೆ.
03:30 ಅವಳು ಯಾವಾಗಲೂ ಬೆನ್ನನ್ನು ನೇರವಾಗಿ ಇಟ್ಟುಕೊಳ್ಳಬೇಕು ಮತ್ತು ತನ್ನ ಎದೆಗೆ ತಲುಪುವಂತೆ ಮಗುವನ್ನು ಎತ್ತಿಕೊಳ್ಳಬೇಕು.
03:36 ನಂತರ, ಮಗುವನ್ನು ಸರಿಯಾಗಿ ಹೇಗೆ ಇರಿಸುವುದು ಎಂದು ನಾವು ಕಲಿಯೋಣ.
03:42 ಮಗುವಿನ ಹೊಟ್ಟೆಯು, ತಾಯಿಯ ದೇಹಕ್ಕೆ ಮೃದುವಾಗಿ ಒತ್ತಿರಬೇಕು.
03:47 ಅವರಿಬ್ಬರ ದೇಹಗಳ ನಡುವಿನ ದೂರವು ಕಡಿಮೆಯಾದಷ್ಟು, ಸ್ತನವನ್ನು ತಲುಪುವ ಮಗುವಿನ ಪ್ರಯತ್ನವು ಸಹ ಕಡಿಮೆ ಆಗುತ್ತದೆ.
03:54 ಮತ್ತು, ಮಗುವಿಗೆ ಸರಿಯಾಗಿ ಹೊಂದಿಸಿಕೊಳ್ಳಲು ಸುಲಭವಾಗುತ್ತದೆ.
04:00 ಮಗುವಿನ ಸಂಪೂರ್ಣ ದೇಹವನ್ನು ಹಿಡಿದುಕೊಳ್ಳಬೇಕಾದ ವಿಧಾನವು ಎರಡನೇ ಪ್ರಮುಖ ಅಂಶವಾಗಿದೆ.
04:08 ನಾವು ಆಹಾರವನ್ನು ಸೇವಿಸುವಾಗ ನಮ್ಮ ತಲೆ, ಕುತ್ತಿಗೆ ಮತ್ತು ದೇಹವು ಯಾವಾಗಲೂ ಒಂದೇ ದಿಕ್ಕಿನಲ್ಲಿ ಇರುವುದನ್ನು ನೀವು ಗಮನಿಸಿರಬಹುದು.
04:16 ಆದರೆ ಸ್ತನ್ಯಪಾನ ಮಾಡಿಸುವಾಗ, ಕೆಲವು ಸಲ ತಾಯಂದಿರು ಮಗುವಿನ ತಲೆಯನ್ನು ಪಕ್ಕಕ್ಕೆ ತಿರುಗಿಸಿರುತ್ತಾರೆ.
04:23 ಹಾಲುಣಿಸುವಾಗ ಇದು ಮಗುವಿಗೆ ಅನಾನುಕೂಲವನ್ನು ಮಾಡುತ್ತದೆ.
04:28 ಸ್ತನ್ಯಪಾನ ಮಾಡಿಸುವಾಗ, ಮಗುವಿನ ತಲೆ, ಕುತ್ತಿಗೆ ಮತ್ತು ದೇಹವು ಒಂದೇ ಸಾಲಿನಲ್ಲಿರಬೇಕು.
04:35 ಇದರಿಂದ ಮಗುವಿಗೆ ಹಾಲನ್ನು ನುಂಗಲು ಸುಲಭವಾಗುತ್ತದೆ.
04:41 ಮಗುವಿನ ದೇಹವನ್ನು ಹೊಂದಿಸುವ ಬಗ್ಗೆ, ಈಗ ನಾವು ಮೂರನೆಯ ಅಂಶಕ್ಕೆ ಬರುತ್ತೇವೆ.
04:46 ತಾಯಿಯು ತನ್ನ ಮಗುವಿನ ಪೂರ್ತಿ ಶರೀರವನ್ನು ಹಿಡಿದುಕೊಳ್ಳಬೇಕು.
04:51 ಇಲ್ಲದಿದ್ದರೆ, ಮಗುವು ತಾಯಿಯ ಸ್ತನಕ್ಕೆ ಗಟ್ಟಿಯಾಗಿ ಹೊಂದಿಸಿಕೊಳ್ಳಲು (attach) ಬಹಳ ಪ್ರಯತ್ನಿಸಬೇಕಾಗುವುದು.
04:58 ನಂತರ, ನಾವು ಮಗುವಿನ ಮೂಗು ಮತ್ತು ಗದ್ದಗಳ ಸ್ಥಾನವನ್ನು ನೋಡೋಣ.
05:03 ಶಿಶುವಿನ ಮೂಗು ಮತ್ತು ತಾಯಿಯ ಮೊಲೆತೊಟ್ಟು ಒಂದೇ ಸಾಲಿನಲ್ಲಿರಬೇಕು.
05:07 ಮತ್ತು, ಗದ್ದವು ಮುಂದೆ ಬಂದಿದ್ದು ಸ್ತನಕ್ಕೆ ಅತೀ ಹತ್ತಿರವಾಗಿರಬೇಕು.
05:13 ಲ್ಯಾಚಿಂಗ್ ಸಮಯದಲ್ಲಿ, ಶಿಶು ಅರಿಯೋಲಾದ ಕೆಳಗಿನ ಹೆಚ್ಚು ಭಾಗವನ್ನು ಒಳಗೆ ತೆಗೆದುಕೊಳ್ಳುವುದನ್ನು ಇದು ಖಚಿತಪಡಿಸುತ್ತದೆ.
05:19 ಹೀಗಾಗಿ, ಹೆಚ್ಚು ಹಾಲನ್ನು ಕುಡಿಯಲು ಕೆಳದವಡೆಯನ್ನು ಬಳಸುತ್ತದೆ.
05:26 ದಯವಿಟ್ಟು ಗಮನಿಸಿ: ಅರಿಯೋಲಾ, ಮೊಲೆತೊಟ್ಟಿನ ಸುತ್ತಲೂ ಇರುವ ಕಪ್ಪು ಜಾಗವಾಗಿದೆ.
05:32 ಈಗ ಮಗುವನ್ನು ಸರಿಯಾಗಿ ಹಿಡಿದುಕೊಂಡಿರುವುದರಿಂದ,
05:35 ಸ್ತನವನ್ನು ಹೇಗೆ ಹಿಡಿದುಕೊಳ್ಳಬೇಕು ಎಂದು ನಾವು ಕಲಿಯೋಣ.
05:39 ತಾಯಿಯು ತನ್ನ ಖಾಲಿ ಇರುವ ಕೈಯ ಬೆರಳುಗಳನ್ನು ಬಳಸಿ, U ಆಕಾರದಲ್ಲಿ ಇರುವಂತೆ ಮೇಲಿನಿಂದ ತನ್ನ ಸ್ತನವನ್ನು ಹಿಡಿಯಬೇಕು.
05:48 ಈ ಚಿತ್ರದಲ್ಲಿ, ತಾಯಿಯು ತನ್ನ ಬಲಗಡೆಯ ಸ್ತನವನ್ನು ಹಿಡಿದುಕೊಳ್ಳಲು ಎಡಗೈಯನ್ನು ಬಳಸುತ್ತಾಳೆ.
05:55 ಹೆಬ್ಬೆರಳು ಮತ್ತು ಬೆರಳುಗಳ ಸರಿಯಾದ ಸ್ಥಾನವನ್ನು ತಿಳಿದುಕೊಳ್ಳಲು, ತಾಯಿಯ ಬಲ ಮೊಲೆಯಲ್ಲಿ, ಮೊಲೆತೊಟ್ಟನ್ನು ಗಡಿಯಾರದ ಕೇಂದ್ರ ಎಂದು ಊಹಿಸಿ.
06:04 ತಾಯಿಯು ತನ್ನ ಎಡ ಹೆಬ್ಬೆರಳನ್ನು, ಈ ಗಡಿಯಾರದಲ್ಲಿ ಗಂಟೆ 3 ಆದ ಹಾಗೆ ಇಡಬೇಕು.
06:10 ಅವಳ ಎಡ ತೋರುಬೆರಳು ಮತ್ತು ಮಧ್ಯದ ಬೆರಳನ್ನು ಗಂಟೆ 9 ಆದಾಗಿನ ಹಾಗೆ ಇಡಬೇಕು.
06:18 ಸ್ತನವನ್ನು ಹಿಡಿದಿರುವ ತಾಯಿಯ ಬೆರಳುಗಳು, ಯಾವಾಗಲೂ ಮಗುವಿನ ತುಟಿಗಳಿರುವ ದಿಕ್ಕಿನಲ್ಲಿಯೇ ಇರಬೇಕು.
06:25 ಯಾಕೆ?

ಸರಳವಾದ ಒಂದು ಉದಾಹರಣೆಯನ್ನು ಬಳಸಿ, ನಾವು ಇದನ್ನು ತಿಳಿದುಕೊಳ್ಳೋಣ.

06:30 ನಾವು ವಡಾ-ಪಾವ್ ಅಥವಾ ಬರ್ಗರ್ ಅನ್ನು ತಿನ್ನುವಾಗ, ನಮ್ಮ ತುಟಿಗಳು ಅಡ್ಡಲಾಗಿ ತೆರೆದುಕೊಳ್ಳುತ್ತವೆ.
06:35 ದೊಡ್ಡ ತುತ್ತನ್ನು ತೆಗೆದುಕೊಳ್ಳಲು, ನಾವು ವಡಾ-ಪಾವ್ ಅಥವಾ ಬರ್ಗರ್ ಅನ್ನು ಅಡ್ಡಲಾಗಿ ಹಿಡಿದುಕೊಳ್ಳುತ್ತೇವೆ.
06:40 ಇಲ್ಲಿ, ಹೆಬ್ಬೆರಳು ಮತ್ತು ಬೆರಳುಗಳನ್ನು ತುಟಿಗಳ ದಿಕ್ಕಿನಲ್ಲಿ ಇರಿಸಲಾಗುತ್ತದೆ.
06:46 ವಡಾ-ಪಾವ್ ಅಥವಾ ಬರ್ಗರ್ ಅನ್ನು ಲಂಬವಾಗಿ ಹಿಡಿದಿದ್ದರೆ, ದೊಡ್ಡ ತುತ್ತನ್ನು ತೆಗೆದುಕೊಳ್ಳಲು ನಮಗೆ ಸಾಧ್ಯವಾಗುವುದಿಲ್ಲ.
06:53 ಹಾಗೆಯೇ, ಮಗುವಿನ ತುಟಿಗಳ ದಿಕ್ಕನ್ನು ಗಮನಿಸಿ. ತುಟಿಗಳು ಇಲ್ಲಿ ಲಂಬವಾಗಿವೆ.
07:00 ಆದ್ದರಿಂದ, ಬೆರಳುಗಳು ಮತ್ತು ಹೆಬ್ಬೆರಳನ್ನು ಕೂಡ ಸ್ತನದ ಮೇಲೆ ಲಂಬವಾಗಿ ಇಡಬೇಕು.
07:06 ಇದು, ಮಗುವಿಗೆ ತನ್ನ ಬಾಯಿಯಲ್ಲಿ ಕೆಳಗಿನ ಅರಿಯೋಲಾದ ದೊಡ್ಡ ಭಾಗವನ್ನು ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.
07:13 ಮಗುವಿನ ತುಟಿಗಳ ದಿಕ್ಕಿನಲ್ಲಿ ಇರುವುದರ ಜೊತೆಗೆ, ತಾಯಿಯ ಹೆಬ್ಬೆರಳು ಮತ್ತು ಬೆರಳುಗಳು ಯಾವಾಗಲೂ ಮೊಲೆತೊಟ್ಟಿನಿಂದ 3 ಬೆರಳುಗಳ ಅಂತರದಲ್ಲಿ ಇರಬೇಕು.
07:23 ಮತ್ತೆ, ವಡಾ-ಪಾವ್ ಅಥವಾ ಬರ್ಗರ್ ಅನ್ನು ತಿನ್ನುವಾಗ, ನಾವು ಅದನ್ನು ಬಹಳ ಹತ್ತಿರದಲ್ಲಿ ಹಿಡಿದುಕೊಂಡರೆ, ನಮ್ಮ ಬೆರಳುಗಳು ದೊಡ್ಡ ತುತ್ತನ್ನು ತೆಗೆದುಕೊಳ್ಳದಂತೆ ಬಾಯಿಗೆ ಅಡ್ಡಬರುತ್ತವೆ.
07:34 ನಾವು ಅದನ್ನು ತುಂಬಾ ದೂರದಲ್ಲಿ ಹಿಡಿದರೆ, ಅದು ನಮ್ಮ ಬಾಯಿಯಲ್ಲಿ ಹೋಗಬಹುದಾದ ಆಕಾರದಲ್ಲಿ ಇರುವುದಿಲ್ಲ.
07:41 ಆದ್ದರಿಂದ, ದೊಡ್ಡ ತುತ್ತನ್ನು ತೆಗೆದುಕೊಳ್ಳಲು, ಅದನ್ನು ಸರಿಯಾದ ದೂರದಲ್ಲಿ ಹಿಡಿದುಕೊಳ್ಳುತ್ತೇವೆ.
07:47 ಹೀಗೆಯೇ, ಈ ಚಿತ್ರದಲ್ಲಿ ತೋರಿಸಿರುವಂತೆ, ಮಗುವಿಗೆ ಮೊಲೆತೊಟ್ಟಿನಿಂದ 3 ಬೆರಳುಗಳ ಅಂತರವು ಸರಿಯಾಗಿದೆ.
07:55 ಈ ಅಂತರವು, ಕೆಳಗಿನ ಅಂಶಗಳನ್ನು ಖಚಿತಪಡಿಸುತ್ತದೆ-

ಮಗುವು ತನ್ನ ಬಾಯಿಯಲ್ಲಿ ಅರಿಯೋಲಾದ ದೊಡ್ಡ ಭಾಗವನ್ನು ತೆಗೆದುಕೊಳ್ಳುವಾಗ ತಾಯಿಯ ಬೆರಳುಗಳು ಅಡ್ಡಬರುವುದಿಲ್ಲ,

08:05 ತಾಯಿಯು ಕೇವಲ ಮೊಲೆತೊಟ್ಟನ್ನು ಮಾತ್ರ ಒತ್ತುವುದಿಲ್ಲ. ಏಕೆಂದರೆ, ಇದರಿಂದ ತುಂಬಾ ಕಡಿಮೆ ಹಾಲು ಸಿಗುತ್ತದೆ.
08:11 ತಾಯಿಯು ಹೆಚ್ಚು ಹಾಲು ಹೊರಗೆ ಬರಲು, ಅರಿಯೋಲಾದ ಕೆಳಗಿನ ಹಾಲಿನ ದೊಡ್ಡ ನಾಳಗಳನ್ನು ಒತ್ತುತ್ತಾಳೆ.
08:17 ಮತ್ತು, ಮಗುವಿಗೆ ಗಟ್ಟಿಯಾಗಿ ಅಂಟಿಕೊಳ್ಳಲು ಸಹಾಯವಾಗುವಂತೆ, ಸ್ತನವನ್ನು ಸರಿಯಾಗಿ ಹಿಡಿಯಲಾಗಿದೆ.
08:23 ನೆನಪಿಡಿ-

ಮಗುವಿನ ಗದ್ದ ಇರುವ ಸ್ತನದ ಬದಿಯಲ್ಲಿ, ತಾಯಿಯ ಹೆಬ್ಬೆರಳು ಇರಬೇಕು.

08:30 ಮತ್ತು, ಮಗುವಿನ ಮೂಗು ಇರುವ ಸ್ತನದ ಬದಿಯಲ್ಲಿ, ಅವಳ 2 ಬೆರಳುಗಳು ಇರಬೇಕು.
08:36 ನಾವು ವಡಾ- ಪಾವ್ ಅಥವಾ ಬರ್ಗರ್ ನ ಉದಾಹರಣೆಗೆ ಹಿಂತಿರುಗೋಣ.
08:41 ವಡಾ-ಪಾವ್ ಅಥವಾ ಬರ್ಗರ್ ಅನ್ನು ಸರಿಯಾಗಿ ಹಿಡಿದ ನಂತರ, ನಾವು ದೊಡ್ಡ ತುತ್ತು (bite) ತೆಗೆದುಕೊಳ್ಳಲು ಅದನ್ನು ಅದುಮಿ ಹಿಡಿಯುತ್ತೇವೆ.
08:48 ಹೀಗೆಯೇ, ತಾಯಿಯು ಮೇಲಿನಿಂದ U ಆಕಾರದಲ್ಲಿ, ತನ್ನ ಸ್ತನವನ್ನು ಮೆತ್ತಗೆ ಒತ್ತಿ ಹಿಡಿಯಬೇಕು.
08:54 ಇದು, ಮಗುವಿಗೆ ಕೆಳಗಿನ ಅರಿಯೋಲಾದ ದೊಡ್ಡ ಭಾಗವನ್ನು ತನ್ನ ಬಾಯಿಯಲ್ಲಿ ತೆಗೆದುಕೊಳ್ಳಲು ಸಹಾಯ ಮಾಡುತ್ತದೆ.
09:01 ಆದರೆ ನೆನಪಿಡಿ, ತಾಯಿಯು ತನ್ನ ಸ್ತನವನ್ನು ತಲೆಕೆಳಗಾದ V ಆಕಾರದಲ್ಲಿ ಅದುಮಬಾರದು.
09:07 V ಆಕಾರದ ಒತ್ತುವಿಕೆಯು ಸ್ತನವನ್ನು ಹಿಸುಕುತ್ತದೆ ಮತ್ತು ನಿಪ್ಪಲ್ ಫೀಡಿಂಗ್ ಅನ್ನು ಉಂಟುಮಾಡುತ್ತದೆ.
09:14 ಅಲ್ಲದೆ, ಹೆಬ್ಬೆರಳು ಮತ್ತು ಬೆರಳುಗಳಿಂದ ಸ್ತನವನ್ನು ಸಮನಾಗಿ ಒತ್ತಲಾಗುತ್ತಿದೆ ಎಂದು ಖಚಿತಪಡಿಸಿಕೊಳ್ಳಿ.
09:21 ಇಲ್ಲದಿದ್ದರೆ, ಮೊಲೆತೊಟ್ಟು ಬಲ ಅಥವಾ ಎಡಭಾಗಕ್ಕೆ ಸರಿಯುತ್ತದೆ
09:27 ಮತ್ತು ಸ್ತನಕ್ಕೆ ಸರಿಯಾಗಿ ಹೊಂದಿಸಿಕೊಳ್ಳಲು ಮಗುವಿಗೆ ಸಾಧ್ಯವಾಗುವುದಿಲ್ಲ.
09:32 ನೆನಪಿಡಿ, ಮಗುವಿನ ಕಡೆಗೆ ಸ್ತನವನ್ನು ಬದಿಯಿಂದ ತಳ್ಳುವ ಮೂಲಕ ಅದನ್ನು ಮಗುವಿನೆಡೆಗೆ ತರಬೇಡಿ.
09:39 ಯಾವಾಗಲೂ ಮಗುವನ್ನು ಸ್ತನದ ಕಡೆಗೆ ತನ್ನಿ.
09:43 ಈಗ, ಮಗು 'ಕ್ರೇಡಲ್ ಹೋಲ್ಡ್' ನಲ್ಲಿದೆ ಮತ್ತು ಸ್ತನ್ಯಪಾನಕ್ಕಾಗಿ ಹೊಂದಿಸಿಕೊಳ್ಳಲು ಸಿದ್ಧವಾಗಿದೆ.
09:49 ತಾಯಿಯ ಸ್ತನಕ್ಕೆ ಮಗುವನ್ನು ಸರಿಯಾದ ಜೋಡಿಸುವ ವಿಧಾನದ ಬಗ್ಗೆ, ಇದೇ ಸರಣಿಯ ಮತ್ತೊಂದು ಟ್ಯುಟೋರಿಯಲ್ ನಲ್ಲಿ ವಿವರಿಸಲಾಗಿದೆ.
09:58 ಒಮ್ಮೆ ಮಗು ಸ್ತನಕ್ಕೆ ಸರಿಯಾಗಿ ಅಂಟಿಕೊಂಡಿತೆಂದರೆ ಮತ್ತು ಸ್ತನವು ತುಂಬಾ ಭಾರವಾಗಿರದಿದ್ದರೆ ಆಗ -
10:05 ತಾಯಿಯು ಸ್ತನವನ್ನು ತನ್ನ ಕೈಯಿಂದ ಬಿಡಬೇಕು.
10:09 ಮತ್ತು ಆ ಕೈಯನ್ನು ಮಗುವಿನ ಆಧಾರಕ್ಕಾಗಿ ಕೆಳಗೆ ತರಬೇಕು.
10:14 ಈ ಸ್ಥಾನದಲ್ಲಿ, ತಾಯಿಯು ತನ್ನ ಎರಡೂ ತೋಳುಗಳನ್ನು ತನ್ನ ಶರೀರದ ತುಂಬಾ ಹತ್ತಿರಕ್ಕೆ ತರಬೇಕು.
10:21 ಹಾಲುಣಿಸುವ ಸಮಯದಲ್ಲಿ ಇದು ಅವಳನ್ನು ಆರಾಮವಾಗಿಡುತ್ತದೆ.
10:26 ಇಲ್ಲಿಗೆ ನಾವು ಈ ಟ್ಯುಟೋರಿಯಲ್ ನ ಕೊನೆಗೆ ಬಂದಿದ್ದೇವೆ.
10:29 ಧನ್ಯವಾದಗಳು.

Contributors and Content Editors

Debosmita, Nayana, Sandhya.np14